ಬಂಟ್ವಾಳ: ಸರಕಾರಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ವಿದ್ಯಾರ್ಥಿನಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವಿದ್ಯಾರ್ಥಿ ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯ ಅವರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಸರಕಾರಿ ಬಸ್ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಲಭಾಗದಲ್ಲಿ ಬಂದು ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ತಂದೆ ಗೋಪಾಲ ಸಪಲ್ಯ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.