Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಸೇನೆಯಲ್ಲಿ ‘ನರ್ಸಿಂಗ್’ ಸೇವೆಗೆ ಮಹಿಳೆಯರಿಗೆ ಇದ್ದ ಅವಕಾಶ ರದ್ದು : ಹೈಕೋರ್ಟ್ ಆದೇಶ

    ಸೇನೆಯಲ್ಲಿ ‘ನರ್ಸಿಂಗ್’ ಸೇವೆಗೆ ಮಹಿಳೆಯರಿಗೆ ಇದ್ದ ಅವಕಾಶ ರದ್ದು : ಹೈಕೋರ್ಟ್ ಆದೇಶ

    curiouslabsBy curiouslabs11 January 2024Updated:28 March 2024 ತಂತ್ರಜ್ಞಾನ No Comments2 Mins Read
    Share
    Facebook WhatsApp
    Share on:

    ಸೇನೆಯಲ್ಲಿ ನರ್ಸಿಂಗ್‌ ಸೇವೆಗೆ ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಿದ್ದ ಭಾರತೀಯ ಮಿಲಟರಿ ನರ್ಸಿಂಗ್‌ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ ‘ಮಹಿಳೆಯಾಗಿದ್ದರೆ’ ಎಂಬ ಪದವನ್ನು ಅಸಾಂವಿಧಾನಿಕ ಎಂದು ಹೈಕೊರ್ಟ್ ಘೋಷಣೆ ಮಾಡಿದೆ.

    ಈ ರೀತಿಯ ಮೀಸಲಾತಿ ನೀಡುವುದು ಸಂವಿಧಾನದ ಪರಿಚ್ಛೇದ 14(ಸಮಾನತೆ), 16(2) (ಲಿಂಗ ತಾರತಮ್ಯ) ಹಾಗೂ 21 (ಜೀವ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಉಲ್ಲಂಘಿಸಿದಂತಾಗಲಿದೆ ಎಂದು ಧಾರವಾಡ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, 81 ವರ್ಷಗಳ ಹಳೆಯ ಕಾನೂನನ್ನು ರದ್ದುಗೊಳಿಸಿ ಆದೇಶಿಸಿದೆ.

    ಹುಬ್ಬಳ್ಳಿಯ ಕೆಎಲ್‌ಇ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಂಜಯ್ ಎಂ ಪೀರಾಪುರ, ಕರ್ನಾಟಕ ಶುಶೂಷಕರ ಸಂಘ ಮತ್ತಿತರರು ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಧಾರವಾಡದ ನ್ಯಾಯಪೀಠ ಈ ಆದೇಶ ನೀಡಿದೆ.

    ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು1943ರಲ್ಲಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದರು. ಅದನ್ನು ಸಂವಿಧಾನದ ಅಡಿಯಲ್ಲಿ ಅಳವಡಿಸಿಕೊಂಡು ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ. ಆದರೆ, ಈ ಕಾನೂನು ಸಂವಿಧಾನದ 33ನೇ ಪರಿಚ್ಛೇದದಂತೆ ಸಂಸತ್ತು ಜಾರಿಗೆ ತಂದಿರುವ ಕಾನೂನನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

    ಅಲ್ಲದೆ, ಸಂವಿಧಾನದ ಅಡಿಯಲ್ಲಿ ಮಹಿಳೆಯನ್ನು ಪ್ರತ್ಯೇಕ ವರ್ಗವೆಂದು ಹೇಳಿರುವುದು ನ್ಯಾಯಸಮ್ಮತವಾಗಿದೆ. ಆದರೆ, ಈ ಆಶಯವನ್ನು ಈಡೇರಿಸುವುದಕ್ಕಾಗಿ ತಾರ್ಕಿಕವಲ್ಲದ ರೀತಿಯಲ್ಲಿ ಮಹಿಳೆಯರಿಗೆ ಶೇ.100ರಷ್ಟು ಮೀಸಲಾತಿ ನೀಡಬೇಕು ಎಂದಾಗುವುದಿಲ್ಲ ಮತ್ತು ಪರಿಚ್ಛೇದ 15(3) (ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುವ ಅವಕಾಶ)ರ ಅಡಿಯಲ್ಲಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

    ಆದಾಗ್ಯೂ, ಮೀಸಲಾತಿಯ ಪರಿಕಲ್ಪನೆಯು ವಂಚಿತರಿಗೆ ಸೌಲಭ್ಯವನ್ನು ಕಲ್ಪಿಸುವುದಾಗಿದೆಯೇ ವಿನಃ ಸೌಲಭ್ಯಗಳಿಂದ ವಂಚಿತರನ್ನಾಗಿಸುವುದಲ್ಲ. ಸಕಾರಣಗಳಿಲ್ಲದೆ ಶೇ.100ರಷ್ಟು ಮಹಿಳೆಯರಿಗೆ ಮಾತ್ರ ಅವಕಾಶ ನೀಡಿದಲ್ಲಿ ಮೀಸಲಾತಿ ಕಲ್ಪನೆ ಅಂತ್ಯಗೊಳಿಸಿದಂತಾಗುತ್ತದೆ. ಜತೆಗೆ, ಮೀಸಲು ಸೌಲಭ್ಯದಿಂದ ಪುರುಷರನ್ನು ಪ್ರತ್ಯೇಕಿಸಿದಂತಾಗಲಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

    ಸ್ವಾಂತಂತ್ರ್ಯ ಪೂರ್ವದಲ್ಲಿ ಮಹಿಳೆಯರು ಸೇನೆಗೆ ಸೇರಲು ಹಿಂಜರಿಯುತ್ತಿದ್ದರು. ಆದ ಕಾರಣ ಮಹಿಳೆಯನ್ನು ಪ್ರೋತ್ಸಾಹಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಶೇ.100ರಷ್ಟು ಮೀಸಲಾತಿ ನೀಡಲಾಗಿತ್ತು. ಆದರೆ, 1943ರಲ್ಲಿ ಇದ್ದಂತಹ ಪರಿಸ್ಥಿತಿ ಪ್ರಸ್ತುತ ಇಲ್ಲ. ಈ ಸುಗ್ರೀವಾಜ್ಞೆ ಜಾರಿಯಾಗಿ 8 ದಶಕಗಳು ಕಳೆದಿವೆ. ಆದರೂ ಇಂದಿಗೂ ಮೀಸಲಾತಿ ಒದಗಿಸುವ ಉದ್ದೇಶಗಳು ಏನು ಎಂಬುದಕ್ಕೆ ಸೂಕ್ತ ಕಾರಣ ನೀಡಿಲ್ಲ. ಆದ್ದರಿಂದ ಈ ಮೀಸಲು ಸೌಲಭ್ಯ ಸಮರ್ಥನೆಗೆ ಅರ್ಹವಿಲ್ಲ ಎಂದು ಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

    ಪ್ರಕರಣದ ಹಿನ್ನೆಲೆ ಏನು?

    2010ರ ಫೆಬ್ರುವರಿ 13 ಮತ್ತು 19ರಂದು ಶುಕ್ರೂಷಕಿಯರ ನೇಮಕ ಸಂಬಂಧ ಭಾರತೀಯ ಮಿಲಟರಿ ಸೇನೆ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯಲ್ಲಿ ಮಹಿಳೆಯರು ಮಾತ್ರ ಎಂದು ತಿಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು, ಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ ‘ಮಹಿಳೆಯಾಗಿದ್ದರೆ’ ಎಂಬ ಪದವನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ಕೋರಿದ್ದರು.

    ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು, ಅಧಿಸೂಚನೆಗೆ ಸಂಬಂಧಿಸಿದಂತೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಗೆ ಮತ್ತು ಅರ್ಜಿದಾರರ ಸಂಘದಲ್ಲಿ ಇಬ್ಬರಿಗೆ ಈಗಾಗಲೇ ವಯೋಮಿತಿ ಮೀರಿದೆ ಎಂದು ವಾದ ಮಂಡಿಸಿದ್ದರು.

    Share on:

    Keep Reading

    ಇಡೀ ರಾತ್ರಿ ಯಕ್ಷಗಾನಕ್ಕೆ ಮುಂದಾದ ಕಟೀಲು ಮೇಳಕ್ಕೆ ದಕ್ಷಿಣ ಕನ್ನಡ ಡಿ.ಸಿ ಯಿಂದ ಕಟ್ಟುನಿಟ್ಟಿನ ಸೂಚನೆ

    ಉಡುಪಿ: ಶ್ರೀಕೃಷ್ಣಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬದಲು

    ವಾಮದಪದವು: ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಮತ್ತು ಸಿಬ್ಬಂದಿಯಿಂದ ಗ್ರಾಹಕನಿಗೆ ಹಲ್ಲೆ – ದೂರು ದಾಖಲು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.