Author: curiouslabs

ಕಾಪು:ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಘಟನೆ ಉಡುಪಿಯ ಕಾಪು ರಾಷ್ಟ್ರೀಯ ಹೆದ್ದಾರಿಯ 66ರ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ಜ. 28 ರಂದು ನಡೆದಿದೆ. ಸಹಸವಾರ ಪಾಂಗಾಳ ದುರ್ಗಾ ವೆಲ್ ರಿಂಗ್ ವರ್ಕ್ಸ್ ಕಾರ್ಮಿಕನಾಗಿರುವ ಮಲ್ಲೇಶ್ (53) ಎಂಬಾತ ಮೃತಪಟ್ಟಿದ್ದು, ಬೈಕ್ ಸವಾರ ಜಯನ್ ಗಾಯಗೊಂಡಿದ್ದಾರೆ.ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ಮತ್ತು ಉಳಿಯಾರಗೋಳಿ ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಹೋಂಡಾ ಬೈಕ್ ಪರಸ್ಪರ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಅಪಘಾತದ ರಭಸಕ್ಕೆ ಸಹ ಸವಾರನಾಗಿದ್ದ ಮಲ್ಲೇಶ್ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆಗೆ ತೀವ್ರ ಗಾಯಗಳುಂಟಾಗಿತ್ತು. ಸವಾರ ಜಯನ್ ಕಾಲು ಮುರಿತಕ್ಕೊಳಗಾಗಿದ್ದು ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಮಲ್ಲೇಶ್ ಮೃತಪಟ್ಟಿದ್ದಾರೆ.ಪಲ್ಸರ್ ಬೈಕ್ ಸವಾರ ಶ್ರೀನಿವಾಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಬಜಪೆ: 2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿಯವರ ಸೇವಾ ಪದಕವು ಬಜಪೆ ಪೊಲೀಸ್ ಠಾಣೆಯ ಎ ಎಸ್ ಐ ರಾಮ ಪೂಜಾರಿ ಅವರಿಗೆ ಲಭಿಸಿದೆ. ರಾಮ ಪೂಜಾರಿಯವರು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಪದಕ ಬಂದಿದ್ದು, ಇವರು 10 -11- 1993 ರಂದು ಪೊಲೀಸ್ ಇಲಾಖೆಗೆ ಸೇರಿದ್ದು, ಕಾರವಾರ ಪಿ.ಟಿ.ಎಸ್. ನಲ್ಲಿ ಮೂಲ ತರಬೇತಿ ಪಡೆದು, ಮಂಗಳೂರಿನಿಂದ ಕಾರವಾರಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಹೋಗುವಾಗ ಹೊನ್ನಾವರದ ಬಾರ್ಜ್ ನಲ್ಲಿ ನೀರಿನಲ್ಲಿ ಬಸ್ ಮುಳುಗಿ ಅದರಲ್ಲಿ ಸುಮಾರು 25 ಜನರ ಪ್ರಾಣವನ್ನು ಆರು ಜನ ಪೊಲೀಸರ ತಂಡ ರಕ್ಷಣೆ ಮಾಡಿದ ಕೀರ್ತಿ ಇವರದ್ದಾಗಿರುತ್ತದೆ. ಬ್ರಹ್ಮಾವರ, ಸುಳ್ಯ, ಎಸ್.ಪಿ. ವಿಶೇಷ ಪತ್ತೆ ದಳ. ಮೂಡಬಿದ್ರೆ. ಮುಲ್ಕಿ, ಮಂಗಳೂರು ಸಿ.ಸಿ.ಬಿ. ಘಟಕ ದಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಬಜಪೆ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಪರಾಧ ಪತ್ತೆಯಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದು, 30 ವರ್ಷದ ಸೇವಾ ಅವಧಿಯಲ್ಲಿ…

Read More

ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Read More

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ. ಇನ್ನು ತಕ್ಷಣ ಮನೆಯವರು ಮತ್ತು ಸ್ಥಳೀಯರ ಸಹಕಾರದಲ್ಲಿ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಮಗು ಸಾವನ್ನಪ್ಪಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಂದೆ ರೋಷನ್ ದೂರು ನೀಡಿದ್ದಾರೆ.

Read More

ಕುಂದಾಪುರ: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸುತ್ತಿದ್ದ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಹರಿಯಾಣ ರಾಜ್ಯ ಬರ್ಸಿ ಜಟಾನ್‌ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ.ಇವರು ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್ ಡ್ರಾ ಮಾಡಲು…

Read More

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಗಳ ಅದ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರು ವತಿಯಿಂದ ದೈವರಾಜ ಶ್ರೀ ಕೋಟೆದ ಬಬ್ಬು ಸ್ವಾಮಿ ಒಂದು ಆತ್ಮಾಭಿಮಾನದ ಕಥನ ಸಾಕ್ಷ್ಯ ಚಿತ್ರ ಮತ್ತು ಕೃತಿ ಬಿಡುಗಡೆ ಸಮಾರಂಭವು ದಿನಾಂಕ 14-01-2024 ಆದಿತ್ಯ ವಾರ ಸಂಜೆ ಗಂಟೆ ಸೀ ವ್ಯೂ ಹೋಟೆಲ್ ಲೇಡಿಹಿಲ್ ವೃತ್ತ ಮಂಗಳೂರಿನಲ್ಲಿ ನಡೆಯಲಿದೆ. ಅರ್ಚಕರಾದ ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಪಡ್ಡೋಡಿತುಳು ಚಲನಚಿತ್ರ ನಿರ್ದೇಶಕರು, ಪೊರ್ಲು ಆರ್ಟ್‌ ಕುಡ್ಲ ಶ್ರೀ ಬಿ.ಕೆ. ಗಂಗಾಧರ ಕಿರೋಡಿಯನ್‌ ದೀಪ ಬೆಳಗಿಸಲಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್‌ (ರಿ) ಅಧ್ಯಕ್ಷರಾದ ಶ್ರೀ ಮೋಹನಾಂಗಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು. ಮುಖ್ಯ ಅಥಿತಿಗಳಾಗಿ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ ಕಾಮತ್‌, ಮಂಗಳೂರು ಮಹಾನಗರ ಪಾಲಿಕೆ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಭರತ್‌ ಕುಮಾರ್‌, ಎಸ್‌.ಸಿ. ಎಸ್‌.ಟಿ, ಸಂಘಟನೆಗಳ ಒಕ್ಕೂಟದ ಅದ್ಯಕ್ಷರಾದ ಶ್ರೀ ಲೋಲಾಕ್ಷ ಶಿರಡಿ ಸಾಯಿಬಾಬಾ ಮಂದಿರ ಸೇವಾ…

Read More

ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಬಯಲಾಟದ ಸಂದರ್ಭದಲ್ಲಿ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್‌ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ನಿಯಮಗಳ ಅನುಸರಣೆಯು ದೇವಸ್ಥಾನ ಆಡಳಿತ ಮಂಡಳಿಯ ಸಂಪೂರ್ಣ ಜವಾಬ್ದಾರಿಯಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ಜಿಲ್ಲಾಧಿಕಾರಿಯವರ 15-11-2022ರ ಆದೇಶದಲ್ಲಿ ಯಕ್ಷಗಾನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 10 ಗಂಟೆಯಿಂದ ರಾತ್ರಿ 12.30ರವರೆಗೆ ವಿಸ್ತರಿಸಲಾಗಿತ್ತು. ಆದರೆ ಈ ಅದೇಶವನ್ನು ಪ್ರಶ್ನಿಸಿ ಕೃಷ್ಣಕುಮಾರ್‌ ಎಂಬವರು ಹೈಕೋರ್ಟ್‌ ಮೊರೆಹೋಗಿದ್ದರು. ಆ ಕುರಿತ ಹೈಕೋರ್ಟ್‌ ನ 28-11-2023 ಆದೇಶದಲ್ಲಿ ಯಕ್ಷಗಾನ ಮೇಳದ ಪ್ರದರ್ಶನ ಅವಧಿ ಬಗ್ಗೆ ಅರ್ಜಿದಾರರು ಸೂಕ್ತ ಪ್ರಸ್ತಾವನೆ ವಹಿಸಿ ಜಿಲ್ಲಾಧಿಕಾರಿ ಅಗತ್ಯ ಕ್ರಮ ವಹಿಸಬೇಕು ಎಂದು ಆದೇಶಿಸಿದ್ದರೂ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಅಲ್ಲದೆ ಕೋವಿಡ್‌ 19ರ ನಿರ್ದಿಷ್ಟ ನಿಬಂಧನೆ ಅಥವಾ ಕೋವಿಡ್‌ 19ರ ಪೂರ್ವ ಪದ್ಧತಿ ಯಾವುದು ಎಂಬುದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದೂ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ. ಇದೇ ಜನವರಿ…

Read More

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜನವರಿ 17ರಂದು ಸಂಜೆ 4 ಗಂಟೆಯಿಂದ ಮಂಗಳೂರಿನಿಂದ ಉಡುಪಿ ಮತ್ತು ಮಣಿಪಾಲ ಕಡೆಗೆ ಹೋಗುವ ಎಲ್ಲಾ ಖಾಸಗಿ ಬಸ್ಸುಗಳು ಸ್ವಾಗತಗೋಪುರ ರಸ್ತೆಯಲ್ಲಿ ಸಂಚಾರ ಮಾಡದೇ ರಾ.ಹೆ-66 ಮೂಲಕ ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು-ಸಿಟಿ ಬಸ್ಸು ನಿಲ್ದಾಣ-ಐರೋಡಿಕ‌ರ್-ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅದೇ ರೀತಿ ಮಂಗಳೂರಿಗೆ ತೆರಳುವ ಬಸ್ಸುಗಳು ಸರ್ವಿಸ್ ಬಸ್‌ನಿಲ್ದಾಣದಿಂದ ಕಿದಿಯೂರು ಹೊಟೇಲ್ ಮೂಲಕ ಕೆಳಗೆ ಇಳಿದು…

Read More

ಬಂಟ್ವಾಳ: ಹಾಲು ಉತ್ಪಾದಕ ಸಂಘ ವಾಮದಪದವಿನ ಅಧ್ಯಕ್ಷ ಗೋಪಾಲ ಕೃಷ್ಣ ಚೌಟ ಮತ್ತು ಹಾಲು ಉತ್ಪಾದಕ ಸಂಘದ ಸಿಬ್ಬಂದಿ ಜೊತೆಗೂಡಿ ಸಂಘಕ್ಕೆ ಹಾಲು ತರುವ ರಂಜಿತ್ ಗಟ್ಟಿ ಎನ್ನುವವರಿಗೆ ಹಲ್ಲೆ ನಡೆದಿದೆ. ರಂಜಿತ್ ಗಟ್ಟಿ ಅರ್ಜಿ ಸಲ್ಲಿಸಿ ಕೆಲವು ತಿಂಗಳು ಆದರೂ ನನ್ನ ಸಬ್ಸಿಡಿ ಬರಲಿಲ್ಲಾ ಎಂದು ಸಂಘದ ಸಿಬ್ಬಂದಿಯಲ್ಲಿ ಕೇಳಿದಾಗ ಕೋಪ ಕೊಂಡ ಸಿಬ್ಬಂದಿ ಅಸಭ್ಯ ರೀತಿಯಲ್ಲಿ ವರ್ತಿಸಿದರು ಆ ಸಮಯದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಕೃಷ್ಣರು ಸಂಘಕ್ಕೆ ಬಂಡರು ಅವರಲ್ಲಿ ರಂಜಿತ್ ಗಟ್ಟಿ ಕೇಳಿದರು ಸಬ್ಸಿಡಿ ಬರಲಿಲ್ಲಾ ಕಾರಣ ಏನೆಂದು ಅದಕ್ಕೆ ಕೋಪಗೊಂಡ ಸಂಘದ ಅಧ್ಯಕ್ಷರು ಉಡಾಪೆ ಉತ್ತರ ಕೊಟ್ಟರು ಇದರಿಂದ ಸಂಘದ ಸದಸ್ಯ ರಂಜಿತ್ ಗಟ್ಟಿ ನಾವು ದಿನವಿಡಿ ಕಷ್ಟಪಟ್ಟು ದುಡಿದು ಸಂಘಕ್ಕೆ ಹಾಲು ತರುವುದು ನೀವು ಸಂಘಕ್ಕೆ ಹಾಲು ಕೊಡುವುದಿಲ್ಲಾ ಆ ಕಾರಣದಿಂದ ನಿಮಗೆ ಹಾಲು ಉತ್ಪಾಕರ ಕಷ್ಟ ಗೊತ್ತಿಲ್ಲಾ ಎಂದು ಅಧ್ಯಕ್ಷರನ್ನು ತರಾಟೆಗೆ ತೆಗೆದು ಕೊಂಡರು ಇದಕ್ಕೆ ಉತ್ತರ ಕೊಡಲು ಸಾಧ್ಯ ಆಗದೇ ಅಧ್ಯಕ್ಷರು…

Read More

ನಕಲಿ 3 ರೋಜಸ್ ಟೀ ಪೌಡರ್ ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 200 ಕೆಜಿ ನಕಲಿ ಟೀ ಪೌಡರ್, ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಮನೆಯೊಂದರಲ್ಲಿ ನಕಲಿ ಟೀ ಪೌಡರ್ ತಯಾರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮಾಲೀಕ ಮಾಧುಸಿಂಗ್ ಪರಾರಿಯಾಗಿದ್ದಾನೆ. ದಾಳಿಯಲ್ಲಿ 200 ಕೆಜಿ ಟೀ ಪೌಡರ್, ಕೃತ್ಯಕ್ಕೆ ಬಳಸುತ್ತಿದ್ದ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 6 ತಿಂಗಳಿಂದ ಬೆಂಗಳೂರು ಗ್ರಾಮಾಂತರ , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 3 ರೋಜಸ್ ಟೀ ಪುಡಿ ವಹಿವಾಟು ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಕಂಪನಿ ಸೇಲ್ಸ್ ಟೀಂ ಕಾರಣ ಹುಡುಕಲು ಮುಂದಾದ ವೇಳೆ 3 ರೋಜಸ್ ನಕಲಿ ಟೀ ಪುಡಿ ತಯಾರಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಂಪನಿ ಪೊಲೀಸರಿಗೆ ದೂರು ನೀಡಿತ್ತು. ಖಚಿತ ಮಾಹಿತಿ…

Read More