Author: curiouslabs

ಉಡುಪಿ: ಬಿಜೆಪಿ ಮುಖಂಡ ಮತ್ತು ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್‌ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಜ.04 ರ ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸುಧಾಕರ ಶೆಟ್ಟಿ 2013ರಲ್ಲಿ ಬಿಜೆಪಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ , ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Read More

ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಮಂಗಳೂರು: ರಾಜ್ಯ ಆಯುರ್ವೇದ ವೈದ್ಯರುಗಳ ಬಹುದಿನಗಳ ಬೇಡಿಕೆಯಾದ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಲು ಕಾನೂನಿನ್ವಯ ರಾಜ್ಯದಲ್ಲೂ ಕೂಡ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿ ಇಂದು (03-01-2024) ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ಸ್ಥಾಪಕ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧ ಎದುರು ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ನಡೆಯಿತು. ಆಯುರ್ವೇದ ಚಿಕಿತ್ಸೆಯು ಅತ್ಯಂತ ಪುರಾತನ ಆರೋಗ್ಯ ಸಂರಕ್ಷಣೆಯ ವ್ಯವಸ್ಥೆಯಾಗಿದ್ದು ಅದು ಔಷಧ ಮತ್ತು ತತ್ವಶಾಸ್ತ್ರ ಎರಡರ ಸಂಮಿಶ್ರಣವಾಗಿದೆ. ಇದು ಮಾನವನ ದೈಹಿಕ, ಮಾನಸಿಕ ಮತ್ತುಆಧ್ಯಾತ್ಮಿಕ ಬೆಳವಣಿಗೆಯತ್ತಾ ಮುನ್ನಡೆಸುತ್ತದೆ. ಕೊರೋನಾ ಸಂದರ್ಭದಲ್ಲಿ ನಮ್ಮ ಜೀವ ಪಣಕ್ಕಿಟ್ಟುರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರಿಗೆ ಹೊಸ ಜೀವನ ಕಲ್ಪಿಸಿದ್ದಲ್ಲದೆ, ಗ್ರಾಮೀಣ ಭಾಗದ ಜನರಜೀವನಾಡಿಯಾಗಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ಹೇಳಲು ಹೆಮ್ಮೆ ಎನಿಸುತ್ತಿದೆ. ನಮ್ಮ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು…

Read More

ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಮಳೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ಗಂಟೆ ಕರಾವಳಿಯಲ್ಲಿ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Read More

ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380…

Read More

ಬೆಂಗಳೂರು : ಇನ್ಮುಂದೆ ಜಿಲ್ಲಾ ಪಂಚಾಯತ್ ‘CEO’ ಗಳು ವಾರಕ್ಕೊಮ್ಮೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡುವುದು ಕಡ್ಡಾಯವಾಗಿದೆ ಎಂದು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಸಿಇಒಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದರು. ಸರ್ಕಾರದ ಆದೇಶ, ಸೂಚನೆ ಪಾಲಿಸದೇ ತಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ಪರಿಶೀಲಿಸಿದ ಸಚಿವರು ಕೆಲವು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿರುವುದನ್ನು ಗಮನಿಸಿ ತಕ್ಷಣವೆ ಕಾಮಗಾರಿಗಳನ್ನು ಚುರುಕುಗೊಳಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.

Read More

ತುಳುಕೂಟ ಉಡುಪಿ ವತಿಯಿಂದ 22 ನೇ ವರ್ಷದ ಕೆಮ್ಟೂರು ದೊಡ್ಡಣ್ಣ ಶೆಟ್ಟರ ನೆನಪಿನ ತುಳು ನಾಟಕ ಕಾರ್ಯಕ್ರಮ ಜನವರಿ 7 ರಿಂದ 13ರ ವರೆಗೆ ಪ್ರತಿದಿನ ಸಂಜೆ 6.30 ಕ್ಕೆ ಮುದ್ದಣ ಮಂಟಪ, ಎಂ.ಜಿ.ಎಂ ಕಾಲೇಜು ಉಡುಪಿಯಲ್ಲಿ ನಡೆಯಲಿದೆ. ಜನವರಿ 7 ರಂದು ಸಂಜೆ 5 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದ್ಯಮಿ ಪ್ರಸಾದ್ ರಾಜ್ ಕಾಂಚನ್,ರಜತ ಮಹೋತ್ಸವ ಸಮಿತಿ ತುಳುಕೂಟ ಪುಣೆ ಇದರ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಪುತ್ತೂರು,ಉಡುಪಿ ಕನ್ನಡ ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಪಾಲ್ಗೊಳ್ಳಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟ ಉಡುಪಿ ಇದರ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ.

Read More

ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ಅವರು ಅಮಿತ್‌ ಸಿಂಗ್‌ ಅವರನ್ನು ಬರಮಾಡಿಕೊಂಡರು. ಅಮಿತ್‌ ಸಿಂಗ್‌ ಅವರು ಮಂಗಳೂರು ಮತ್ತು ಪುತ್ತೂರಿನಲ್ಲಿ ಎಎಸ್‌ಪಿಯಾಗಿ, ಹಾಸನ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾದಕ ಪದಾರ್ಥ ಮಾರಾಟ ದಂಧೆ, ಕೋಮು ದ್ವೇಷ ಹರಡುವಿಕೆ ನಿಗ್ರಹಕ್ಕೆ ಆದ್ಯತೆ ನೀಡುತ್ತೇನೆ. ಸೈಬರ್ ಅಪರಾಧ ಚಟುವಟಿಕೆ ನಿಯಂತ್ರಣಕ್ಕೂ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು. ಹಿಂದಿನ ಡಿಐಜಿ ಚಂದ್ರಗುಪ್ತ ಅವರು ಬೆಂಗಳೂರು ಅಪರಾಧ ವಿಭಾಗದ ಐಜಿಪಿಯಾಗಿ ಬಡ್ತಿ ಪಡೆದಿದ್ದಾರೆ.

Read More

ಪುತ್ತೂರು ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್‌ ಎಸ್(25ವ)  ಜೀವಾಂತ್ಎಂಯ ಮಾಡಿಕೊಂಡ ಯುವಕನಾಗಿದ್ಬದಾನೆ. ವಿಜಯ್ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ತಂದೆಯ ಜೊತೆ ತಾನು ಮೇಸ್ತ್ರಿಯಾಗಿ ಕೆಲಸಕ್ಕೆ ತೆರಳುತ್ತಿದ್ದ ವಿಜಯ್ ಗುತ್ತಿಗೆದಾರರಾಗಿಯೂ ಕೆಲಸ ಮಾಡುತ್ತಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ , ಸಹೋದರ, ಮತ್ತು ಸಹೋದರಿಯನ್ನು ಅಗಲಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More